ಬೆಂಗಳೂರು
ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ದಿನಕ್ಕೆ 1 ಲಕ್ಷ ಕೋವಿಡ್ ಟೆಸ್ಟ್ ಗುರಿ ತಲುಪಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಶನಿವಾರ ಹೇಳಿದರು.
ಹೊಸಕೋಟೆಯಲ್ಲಿರುವ ಎಂವಿಜೆ ಮೆಡಿಕಲ್ ಕಾಲೇಜು ಹಾಗೂ ರೀಸರ್ಚ್ ಹಾಸ್ಪಿಟಲ್‌ನಲ್ಲಿ ಎಂವಿಜೆ “ಕೋವಿಡ್ ಲ್ಯಾಬ್” ಉದ್ಘಾಟಿಸಿ, ಸುದ್ದಿಗಾರರೊಂದಿಗೆ ಮಾತನಾಡಿ
ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಬದ್ಧತೆ ಪ್ರದರ್ಶಿಸಿದೆ. ಕೇವಲ ಒಂದು ಲ್ಯಾಬ್‌ನಿಂದ ಪ್ರಾರಂಭವಾದ ಕೊವಿಡ್ ಟೆಸ್ಟ್ , ಕೇವಲ ಆರು ತಿಂಗಳಲ್ಲಿ 108 ಲ್ಯಾಬ್‌ಗಳನ್ನು ತೆರೆದಿದ್ದೇವೆ. ಪ್ರಾರಂಭದಲ್ಲಿ ಸುಮಾರು 300 ಕೋವಿಡ್ ಟೆಸ್ಟ್‌ನಿಂದ 75 ಸಾವಿರಕ್ಕೆ ಏರಿಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ದಿನಕ್ಕೆ ಲಕ್ಷ ಕೋವಿಡ್ ಟೆಸ್ಟ್ ಗುರಿ ತಲುಪಲಿದ್ದೇವೆ ಎಂದು ವಿವರಿಸಿದರು.
ಲಸಿಕೆ ಲಭ್ಯವಾದಾಗ ಮಾತ್ರ ಕೋವಿಡ್‌ನನ್ನು ಸಂಪೂರ್ಣ ನಿಗ್ರಹಿಸಲು ಸಾಧ್ಯ . ಸಮಾಧಾನದ ಸಂಗತಿ ಎಂದರೆ ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ. 1.65 ರಷ್ಟಿದೆ. ಇದನ್ನು ಶೇ..1 ಕ್ಕಿಂತ ಕಡಿಮೆ ಮಾಡುವ ಗುರಿ ಹೊಂದಿದ್ದೇವೆ ಎಂದರು.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ