October 23, 2024

Newsnap Kannada

The World at your finger tips!

politics , election , vote

ಸಿಪಿ ಯೋಗೇಶ್ವರ್‌ ಕಾಂಗ್ರೆಸ್ ಸೇರ್ಪಡೆ

Spread the love

ಬೆಂಗಳೂರು: ಚನ್ನಪಟ್ಟಣದಲ್ಲಿ ರಾಜಕೀಯದ ಬೆಳವಣಿಗೆಗಳ ನಡುವೆ ಸಿಪಿ ಯೋಗೇಶ್ವರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಂಸದ ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

ಮಂಗಳವಾರ ತಡರಾತ್ರಿ ಯೋಗೇಶ್ವರ್‌ ಎರಡು ಬಾರಿ ತಮ್ಮ ನಿವಾಸದಿಂದ ರಹಸ್ಯ ಸ್ಥಳಗಳಿಗೆ ತೆರಳಿ ಮಹತ್ವದ ಚರ್ಚೆಗಳನ್ನು ನಡೆಸಿದ್ರು. ಮಧ್ಯರಾತ್ರಿಯಲ್ಲಿ ಖಾಸಗಿ ಹೊಟೇಲಿನಲ್ಲಿ ಡಿಕೆ ಶಿವಕುಮಾರ್‌ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆ ಮಾತುಕತೆಯ ಬಳಿಕ, ಬುಧವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆ ಸಂಬಂಧಿತ ಚರ್ಚೆ ನಡೆದಿದೆ.

ಸಿಪಿ ಯೋಗೇಶ್ವರ್‌ ಅವರಿಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ಬಿಜೆಪಿ ಪ್ರಸ್ತಾಪ ಮಾಡಿತ್ತು. ಬಿಜೆಪಿ ನಾಯಕರು ಹಾಗೂ ಜೆಡಿಎಸ್‌ ಸಹ ಯೋಗೇಶ್ವರ್‌ ಅವರನ್ನು ತನ್ನ ಪಾಳಯಕ್ಕೆ ಕರೆದೊಯ್ಯಲು ಪ್ರಯತ್ನಿಸಿದ್ದರು.

ಅವರು ಹಿಂದಿನಿಂದಲೂ ಪಕ್ಷಾಂತರದ ಕುರಿತಂತೆ ಹಲವು ಸ್ಪಷ್ಟನೆಗಳನ್ನು ನೀಡಿದ್ದರು. “ನನ್ನನ್ನು ಈಗಾಗಲೇ ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ನಾನು ಮತ್ತೊಮ್ಮೆ ಬೇರೆ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆ. ಇದರಿಂದ, ಅವರ ಮುಂದಿನ ರಾಜಕೀಯ ನಿರ್ಧಾರ ಬಗ್ಗೆ ಎಲ್ಲರಲ್ಲೂ ಕುತೂಹಲ ಇತ್ತು. ಇದನ್ನು ಓದಿ –ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ವಾಸಿಸುತ್ತಿದ್ದ 3 ಬಾಂಗ್ಲಾದೇಶ ಪ್ರಜೆಗಳು ಬಂಧನ

ಯೋಗೇಶ್ವರ್‌ ಅವರ ರಾಜಕೀಯ ಪಯಣ:

1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಸಿಪಿ ಯೋಗೇಶ್ವರ್‌ 2004 ಮತ್ತು 2008ರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013ರಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018 ಮತ್ತು 2023ರ ಚುನಾವಣೆಯಲ್ಲಿ ಜೆಡಿಎಸ್‌ ಮುಖಂಡ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಅವರು ಸೋತಿದ್ದರು. 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದರೆ ಯೋಗೇಶ್ವರ್‌ 80,677 ಮತಗಳನ್ನು ಪಡೆದಿದ್ದರು.

Copyright © All rights reserved Newsnap | Newsever by AF themes.
error: Content is protected !!