November 27, 2022

Newsnap Kannada

The World at your finger tips!

jds, flag , rajyotsava

Door to door Kannada flag on November 1: Campaign by JDS ನವಂಬರ್ 1ರಂದು ಮನೆ ಮನೆಗೆ ಕನ್ನಡ ಬಾವುಟ : ಜೆಡಿಎಸ್ ನಿಂದ ಅಭಿಯಾನ

ಸಿಪಿವೈ Vs ಎಚ್‌ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್‌, ಜೆಡಿಎಸ್‌ ಕಾರ್ಯಕರ್ತರು ವಶಕ್ಕೆ

Spread the love

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿಗೆ ಜೆಡಿಎಸ್ ಕಾರ್ಯಕರ್ತರು ಮೊಟ್ಟೆ ಎಸೆದು ಸಿಟ್ಟು , ಆಕ್ರೋಶವನ್ನು ಹೊರಹಾಕಿದ್ದಾರೆ.

ಸಿ.ಪಿ.ಯೋಗೇಶ್ವರ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ನಡುವೆ ನಡೆದ ಜಟಾಪಟಿಯಿಂದಾಗಿ ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.ಇದನ್ನು ಓದಿ –ಇಂದಿನಿಂದಲೇ ವಿದ್ಯುತ್ ದರ ಏರಿಕೆ : ಮತ್ತೆ ರಾಜ್ಯದ ಜನರಿಗೆ ಬೆಲೆ ಏರಿಕೆ ಶಾಕ್

ಈ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ಮಾಡಿ ಮೊಟ್ಟೆ ಎಸೆದು ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಅಡ್ಡಿ ವ್ಯಕ್ತಪಡಿಸಿದ ಘಟನೆ ಜರುಗಿದೆ.

ಈ ಸಂಬಂಧ ಪ್ರತಿಭಟನಾಕಾರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು ಜೆಡಿಎಸ್‌ಗೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಕೊನೆಗೂ ಪೋಲಿಸ್ ಭದ್ರತೆಯಲ್ಲಿ ಯೋಗೇಶ್ವರ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಸಿಎಂ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಉಭಯ ನಾಯಕರು ವಿಶೇಷ ಅನುದಾನಕ್ಕಾಗಿ ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಇಂದು ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆದಿದೆ.

ಆದರೆ ಆಹ್ವಾನ ಪತ್ರಿಕೆಯಲ್ಲಿ ಸಿ.ಪಿ. ಯೋಗೇಶ್ವರ್ ಕೋರಿಕೆ ಮೇರೆಗೆ ಬಿಡುಗಡೆಯಾಗಿರುವ ವಿಶೇಷ ಅನುದಾನ ಎಂದು ಮುದ್ರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಸಿಪಿ.ಯೋಗೇಶ್ವರ್ ನಡೆಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆಂದು ಕಿಡಿಕಾರಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದರು.

error: Content is protected !!