ಬಸ್ ಹಾಗೂ ಟ್ರಕ್ವೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 14 ಜನರು ಸಾವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದಲ್ಲಿ ಭಾನುವಾರ ಬೆಳಗಿನ ಜಾವ ನಡೆದಿದೆ.
ಕರ್ನೂಲ್ ಜಿಲ್ಲೆಯ ವೇಲ್ದುರ್ತಿ ಮಂಡಲ್ನ ಮಾದರ್ಪುರ ಗ್ರಾಮದಲ್ಲಿ ಬಸ್ ಹಾಗೂ ಲಾರಿ ಪರಸ್ಪರ ಡಿಕ್ಕಿಯಾಗಿವೆ.
ಸ್ಥಳದಲ್ಲಿಯೇ ಸಾವನ್ನಪ್ಪಿದವರ ಪೈಕಿ ಎಂಟು ಮಂದಿ ಮಹಿಳೆಯರು. ಒಂದು ಮಗು ಕೂಡ ಸೇರಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ಪಟ್ಟಣದವರು. ಅಜ್ಮೀರ್ ದರ್ಗಾ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.
ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ