January 8, 2025

Newsnap Kannada

The World at your finger tips!

gt somashekar

ಮೈಸೂರು ಹೊರ ವರ್ತುಲ ರಸ್ತೆಗಳ ಸ್ವಚ್ಛತೆಗೆ ತಂಡ ರಚಿಸಿ: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

Spread the love

2021ರ ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮೈಸೂರು ಹೊರ ವರ್ತುಲ ರಸ್ತೆಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲು ತಂಡವನ್ನು ರಚಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದರು.

ಮೈಸೂರು ರಿಂಗ್ ರಸ್ತೆಯ ತ್ಯಾಜ್ಯ ಹಾಗೂ ಡಬ್ರೀಸ್ ಗೆ ಸಂಬಂಧಿಸಿದಂತೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಬಗ್ಗೆ ನಾವೆಲ್ಲರೂ ಗಮನಹರಿಸಲೇಬೇಕು. ಲೋಕೋಪಯೋಗಿ, ಆರ್ ಡಿ ಪಿಆರ್, ರಾಜ್ಯ ಹೆದ್ದಾರಿ ಇಲಾಖೆ, ಕೆಆರ್ ಐಡಿಎಲ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ನಗರ ಪಾಲಿಕೆ, ಅಧೀಕ್ಷಕ ಅಭಿಯಂತರರು ಹಾಗೂ ಯೋಜನಾ ನಿರ್ದೇಶಕರನ್ನೊಳಗೊಂಡ ತಂಡ ರಚನೆ ಮಾಡಲು ಸೂಚನೆ ನೀಡಿದರು.

ಮಾಧ್ಯಮಗಳ ಮೂಲಕ ಎಚ್ಚರಿಕೆ ಸಂದೇಶ

ತ್ಯಾಜ್ಯ ಹಾಗೂ ಕಸ ವಿಲೇವಾರಿಗೆ ಸಂಬಂಧಪಟ್ಟಂತೆ ಕೇವಲ ಮೈಸೂರಿನ ರಿಂಗ್ ರಸ್ತೆ ಮಾತ್ರವಲ್ಲದೆ, ನಗರದೊಳಗೂ ಸಹ ಕಸ ಹಾಕಿದರೆ ದಂಡ ಹಾಗೂ ಜೈಲು ಶಿಕ್ಷೆ ಇದೆ ಎಂಬ ಅಂಶವನ್ನು ಮಾಧ್ಯಮಗಳಲ್ಲಿ ಪ್ರಕಟಣೆಗಳ ಮುಖಾಂತರ ಸಾರ್ವಜನಿಕವಾಗಿ ಎಚ್ಚರಿಕೆ ಸಂದೇಶವನ್ನು ನೀಡಬೇಕು ಎಂದು ಸಚಿವ ಸೋಮಶೇಖರ್ ಸೂಚಿಸಿದರು.

ಜನಸಂಪರ್ಕ ಸಭೆ ನಡೆಸಿ ಅಧಿಕಾರಿಗಳನ್ನು ಕರೆಸಿ ಎಲ್ಲ ರೀತಿಯಲ್ಲಿಯೂ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಎಲ್ಲೆಂದರಲ್ಲಿ ಮಾಂಸ, ಕೋಳಿ ತ್ಯಾಜ್ಯಗಳ ಸುರಿಯುವವರನ್ನು ಗುರುತಿಸಿ ಅವರ ಚಲನವಲನಗಳ ಮೇಲೆನಿಗಾ ಇಡಬೇಕು. ಅವರು ಸೂಕ್ತ ಪ್ರದೇಶದಲ್ಲಿ ವಿಲೇವಾರಿ ಮಾಡದೆ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದರೆ ಎಚ್ಚರಿಕೆ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ತನ್ವೀರ್ ಸೇಠ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಪೊಲೀಸ್ ಆಯುಕ್ತ ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮುಡಾ ಆಯುಕ್ತ ಡಿ.ಬಿ.ನಟೇಶ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Copyright © All rights reserved Newsnap | Newsever by AF themes.
error: Content is protected !!