Main News

ಬೇಕಾದವರಿಗೆ ಕೋಟಿ ಕೋಟಿ, ಹಿಂದೂಗಳ ಹಬ್ಬಕ್ಕೆ ಮಾತ್ರ ಸರಳ – ಯತ್ನಾಳ್

ಸರಳ ದಸರಾ ಆಚರಣೆಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಯಮಬಾಹಿರವಾಗಿ ಮಂತ್ರಿಗಳಿಗೆ ಕಾರುಗಳನ್ನು ಖರೀದಿಸಬಹುದು, ವಕ್ಫ್‌ ಹಾಗೂ ಹಜ್‌ ಭವನಗಳಿಗೆ ಕೋಟಿ ಕೋಟಿ ಅನುದಾನ ಕೊಡಬಹುದು. ಆದರೂ ಹಿಂದೂಗಳ ಹಬ್ಬಗಳು ಮತ್ತು ಉತ್ಸವಗಳು ಮಾತ್ರ ಸರಳವಾಗಿ ಎಂದು ಹೇಳಿದ್ದಾರೆ.

ಬರದ ಹಿನ್ನೆಲೆ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಅದರ ಜೊತೆ ಹಂಪಿ ಉತ್ಸವವನ್ನು ಕೂಡ ಮುಂದೂಡಿದೆ. ಬೇರೆ ಎಲ್ಲದಕ್ಕೂ ಕೋಟಿ ಕೋಟಿ ಖರ್ಚು,ಹಿಂದೂಗಳ ಹಬ್ಬಗಳು ಹಾಗೂ ಉತ್ಸವಗಳು ಮಾತ್ರ ಸರಳವಾಗಿ ಎಂದು ಸರ್ಕಾರದ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವೂ ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ ಮಾಹಿತಿ ಹಂಚಿಕೊಂಡಿದ್ದರು. ತಮಿಳುನಾಡಿಗೆ ಕಾವೇರಿ ನೀರು – ಪ್ರತಿಭಟನೆಗೆ ಸಾಥ್ ನೀಡಿದ ಚುಂಚಶ್ರೀಗಳು

ಈ ಬಗ್ಗೆ ಟ್ವೀಟ್‌ ಮಾಡಿರುವ ಯತ್ನಾಳ್‌, ಈ ಬಾರಿ ಸರಳ ದಸರಾ. ಈ ಬಾರಿ ಹಂಪಿ ಉತ್ಸವ ಇಲ್ಲ ಎಂದು ಸರ್ಕಾರ ನಿರ್ಧರಿಸಿದೆ. ಆದರೆ, ನಿಯಮಗಳನ್ನು ಗಾಳಿಗೆ ತೂರಿ ಮಂತ್ರಿ ಮಂಡಲಕ್ಕೆ ಹೊಸ ಕಾರುಗಳ ಖರೀದಿ. ವಕ್ಫ್ ಹಾಗು ಹಾಜ್ ಭವನಗಳಿಗೆ ಕೋಟಿ ಕೋಟಿ ರೂ. ಅನುದಾನ. ರಾಜೀವ್ ಗಾಂಧೀ ಪುತ್ಥಳಿಗಾಗಿ ಕೋಟಿ ಕೋಟಿ ರೂ. ಖರ್ಚು. ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳಿಗೆ ಕೋಟಿ ಕೋಟಿ ರೂ. ಖರ್ಚು ಮಾಡುತ್ತಿರುವುದನ್ನು ಪ್ರಸ್ತಾಪಿಸಿ, ಹಿಂದೂಗಳ ಹಬ್ಬಗಳು ಹಾಗು ಉತ್ಸವಗಳು ಮಾತ್ರ ಸರಳವಾಗಿ ಎಂದು ಹೇಳಿದ್ದಾರೆ.

Team Newsnap
Leave a Comment

Recent Posts

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024