KUWJ ಅಧ್ಯಕ್ಷ ಶಿವಾನಂದ ತಗಡೂರುಗೆ ಗಡಿನಾಡ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿ ಪ್ರಶಸ್ತಿ ಪ್ರದಾನ

Team Newsnap
1 Min Read
Gadinada Sahitya, Cultural Academy Award to KUWJ President Sivananda Tagadoor KUWJ ಅಧ್ಯಕ್ಷ ಶಿವಾನಂದ ತಗಡೂರುಗೆ ಗಡಿನಾಡ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿ ಪ್ರಶಸ್ತಿ ಪ್ರದಾನ

ಕಾಸರಗೋಡು:
ಕೇರಳ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ನೀಡುವ ಕನ್ನಡ ಸಾಹಿತ್ಯ ರಾಜ್ಯೊತ್ಸವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಕಾಸರಗೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಕೇರಳದ ಸಂಸದ ರಾಜಮೋಹನ ಉಣ್ಣಿತ್ತಾನ್ ಪ್ರಶಸ್ತಿ ಪ್ರದಾನ ಮಾಡಿದರು.ತಮಿಳು ನಟ ಶರತ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಅಪೋಲೋ ಆಸ್ಪತ್ರೆಗೆ ದಾಖಲು

ಕಾಸಗೋಡು ಶಾಸಕರಾದ ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಞಂಬು, ಮಂಜೇಶ್ವರ ಶಾಸಕ ಎ.ಕೆ.ಅಶ್ರಫ್, ಡಾ.ಆರತಿ ಕೃಷ್ಣ , ಗಡಿನಾಡ ಅಕಾಡೆಮಿಯ ಅಧ್ಯಕ್ಷ ಚನಿಯಪ್ಪ ನಾಯ್ಕ, ಸಂಸ್ಥಾಪಕ ಅಧ್ಯಕ್ಷ ಪ್ರದೀಪ ಕಲ್ಕೂರ, ಹಿರಿಯ ಸಾಹಿತಿಗಳಾದ ರಮಾನಂದ ಬನಾರಿ ಮತ್ತಿತರರು ಹಾಜರಿದ್ದರು . ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದವು .

Share This Article
Leave a comment