ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಟಫ್ ರೂಲ್ಸ್ ಜಾರಿಯಿಲ್ಲ . ಆದರೆ ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.
ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಪ್ರಮುಖ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದರು.
ಈ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ. ಅನವಶ್ಯಕವಾಗಿ ಯಾವುದೇ ನಿರ್ಬಂಧ ಹೇರಿಕೆ ಬೇಡ. ಅಗತ್ಯವಿರುವೆಡೆ ನಿರ್ಬಂಧ ಹೇರಿಕೆ ಅಗತ್ಯ ಎಂದು ಮೋದಿ ತಿಳಿಸಿದ್ದಾರೆ.
ಲಸಿಕೆ ನೀಡಲು ಶಾಲೆಗಳಲ್ಲಿ ಅಭಿಯಾನ ಮಾಡುತ್ತೇವೆ. ಟೆಸ್ಟ್, ಟ್ರೀಟ್, ಟ್ರ್ಯಾಕ್, ಲಸಿಕೆ ಅನುಸರಿಸಲು ಹೇಳಿದ್ದಾರೆ ಎಂದು ತಿಳಿಸಿದರು.
ಮೋದಿ ಹೇಳಿದ ನಾಲ್ಕು ಸೂತ್ರ :
ನಾಲ್ಕು ಸೂತ್ರಗಳನ್ನು ಅನುಸರಿಸಲು ಪ್ರಧಾನಿ ಮೋದಿ ಹೇಳಿದ್ದಾರೆ.
1) ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು
2) ವ್ಯಾಕ್ಸಿನೇಷನ್ ವೇಗ ಹೆಚ್ಚಿಸಲು ಸೂಚನೆ
3) ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.
4)ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜೀವನ ನಡೆಸಬೇಕು. ಏರ್‌ಪೋರ್ಟ್‌ಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡುತ್ತೇವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು