ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟುಕು: ಚೆಕ್ ಗೆ ಸಹಿ ಹಾಕುವ ಅಧಿಕಾರಕ್ಕೂ ಕತ್ತರಿ

Team Newsnap
1 Min Read
Curtailment of Gram President's powers: no power to sign cheques ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟುಕು: ಚೆಕ್ ಗೆ ಸಹಿ ಹಾಕುವ ಅಧಿಕಾರಕ್ಕೂ ಕತ್ತರಿ

ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಹೊರಗಿಡಲು ಸರ್ಕಾರ ನಿರ್ಧರಿಸಿ, ಪಂಚಾಯ್ತಿಯ ವ್ಯವಹಾರದ ಎಲ್ಲಾ ಚೆಕ್‌ಗಳಿಗೂ ಸಹಿ ಮಾಡುವ ಅಧಿಕಾರವನ್ನು ಪಿಡಿಒ ಹಾಗೂ ದ್ವಿತೀಯ ದರ್ಜಿ ಲೆಕ್ಕ ಸಹಾಯಕರಿಗೆ (ಎಸ್‌ಡಿಎಎ) ನೀಡಲಾಗಿದೆ.

ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಡಾವಳಿಗಳನ್ನು ರೂಪಿಸಿದೆ.ಇದನ್ನು ಓದಿ –ಮಂಡ್ಯದ ಚೀಣ್ಯ: ಕಾಂಗ್ರೆಸ್‌ ಫ್ಲೆಕ್ಸ್‌ನಲ್ಲಿ ಸಾವರ್ಕರ್‌ ಚಿತ್ರ

ಉದ್ಯೋಗ ಖಾತ್ರಿ, ವಿವಿಧ ವಸತಿ ಯೋಜನೆಗಳ ಅನುಷ್ಠಾನ, ಹಣಕಾಸಿನ ನಿಧಿ, ಪಂಚಾಯಿತಿ ತೆರಿಗೆ, ಖರ್ಚು- ವೆಚ್ಚಗಳ ಎಲ್ಲ ಚೆಕ್‌ಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಹಿಂದೆ ಕಾರ್ಯದರ್ಶಿ) ಹಾಗೂ ಅಧ್ಯಕ್ಷರ ಜಂಟಿ ಸಹಿ ಕಡ್ಡಾಯವಾಗಿತ್ತು.

ಈಗ ಸರ್ಕಾರ 2006ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ಅಧ್ಯಕ್ಷರ ಸಹಿ ಅಧಿಕಾರ ಹಿ೦ಪಡೆಯಲು ಹೊಸದಾಗಿ ನಡಾವಳಿ
ರೂಪಿಸಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ನೀಡಲಾಗಿದ್ದ ಸಹಿ ಅಧಿಕಾರವನ್ನು ಹಿಂಪಡೆಯಲು ಸರ್ಕಾರ ಪ್ರಮುಖವಾಗಿ ಎರಡು ಕಾರಣಗಳನ್ನು ನೀಡಿದೆ. ಯೋಜನೆಗಳು, ಕಾರ್ಯಕ್ರಮಗಳ ಬಿಲ್‌ ಪಾವತಿ ಮಾಡಲು ಲಂಚ ಪಡೆಯುವಾಗ ರಾಜ್ಯದ ಹಲವು ಗ್ರಾಮ ಪಂಚಾಯಿತಿ ಅಧ್ಯಕ್ಷರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಲವು ಪ್ರಕರಣಗಳಲ್ಲಿ ವಿಳಂಬಳವಾಗಿ ಬಿಲ್‌ ಪಾವತಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಅಧ್ಯಕ್ಷರು ಚುನಾಯಿತ ಪ್ರತಿನಿಧಿಯಾಗಿದೆ ಹಣಕಾಸಿನ ವ್ಯವಹಾರಗಳಿಗೆ ಹೊಣೆಗಾರರಲ್ಲದ ಕಾರಣ ಸರ್ಕಾರಿ ನೌಕರರಾದ ಪಿಡಿಒ, ಎಸ್‌ಡಿಎಎ ನಿರ್ವ ಹಿಸಬೇಕು.

ಒಂದು ವೇಳೆ ಪಂಚಾಯಿತಿಗಳಲ್ಲಿ ಎಸ್‌ಡಿಎಎ ಸ್ಮಾನ ಖಾಲಿ ಇದ್ದರೆ, ಪಿಡಿಒ ಜತೆಗೆ ಕಾರ್ಯದರ್ಶಿ ಜಂಟಿ ಸಹಿ ಮಾಡಬೇಕು ಎಂದು ಸೂಚಿಸಲಾಗಿದೆ.

Share This Article
Leave a comment