ನೂಪುರ್ ಶರ್ಮಾ ಬಿಜೆಪಿಯ ವಿವಾದಿತ ನಾಯಕಿ, ಧಾರ್ಮಿಕ ವಿಚಾರ ಕುರಿತ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದ ಯುವಕನ ತಲೆಯನ್ನೇ ಕತ್ತರಿಸಿ ಕೊಲೆ ಮಾಡಲಾಗಿದೆ. ನೂಪುರ್ ಪರವಹಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಕೆಲವೇ ದಿನಗಳಲ್ಲಿ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.
ರಾಜಸ್ಥಾನದ ಉದಯಪುರದ ಮಲ್ಡಾಸ್ ಸ್ಟ್ರೀಟ್ನಲ್ಲಿ ಇಂದು ಈ ಭೀಕರ ಕೊಲೆ ನಡೆದಿದೆ. ಕೊಲೆಯ ದೃಶ್ಯದ ವಿಡಿಯೋವನ್ನೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ದುಷ್ಕರ್ಮಿಗಳು ಪ್ರಧಾನಿ ನರೇಂದ್ರ ಮೋದಿ ಪ್ರಾಣವನ್ನೂ ತೆಗೆಯವುದಾಗಿ ಬೆದರಿಕೆ ಒಡ್ಡಿದ್ದಾರೆ.
ದಸರಾ ಮಾದರಿ ಕೆಂಪೇಗೌಡ ಜಯಂತಿ ಆಚರಣೆಯ ಮನವಿಗೆ ಸರ್ಕಾರದ ಒಪ್ಪಿಗೆ
ಪ್ರಕರಣ ಬೆಳಕಿಗೆ ಬರುತ್ತಿದ್ದ ಹಾಗೆ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಾರ್ವಜನಿಕರು ಕಾನೂನುಬಾಹಿರವಾಗಿ ವರ್ತಿಸದೆ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಭಯಾನಕ ದೃಶ್ಯದ ವಿಡಿಯೋ ಹಂಚಿಕೊಳ್ಳದಂತೆ ಕೋರಿಕೊಂಡಿದ್ದಾರೆ.
ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಕಾಪಾಡುವಂತೆ ನಾನು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು