ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ.
ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ , ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ.
ಕರ್ನಾಟಕ್ಕೆ ಮತ್ತೆ ಕಾವೇರಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಅದೇಶಿಸಲಾಗಿದೆ.
ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ , ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ,ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು.ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ
ಆದರೆ ಮತ್ತೆ ರಾಜ್ಯಕ್ಕೆ ಹಿನ್ನಡೆಯಾಗಿದ್ದು ,ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು