ತಮಿಳುನಾಡಿಗೆ ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡಲು ‘CWRC’ ಸೂಚನೆ

Team Newsnap
1 Min Read

ನವದೆಹಲಿ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಸಿಡಬ್ಲ್ಯುಆರ್ಸಿ (CWRC) ಸೂಚನೆ ನೀಡಿದೆ.

ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ.

ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ , ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ.

ಕರ್ನಾಟಕ್ಕೆ ಮತ್ತೆ ಕಾವೇರಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಅದೇಶಿಸಲಾಗಿದೆ.

ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ , ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ,ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು.ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ

ಆದರೆ ಮತ್ತೆ ರಾಜ್ಯಕ್ಕೆ ಹಿನ್ನಡೆಯಾಗಿದ್ದು ,ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ.

Share This Article
Leave a comment