ನವದೆಹಲಿ : ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.
ರಾಜ್ಯದಲ್ಲಿ ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ 21 ಟಿಎಂಸಿಗೆ ಇಳಿದಿದೆ. ಆದರೆ ಕಾವೇರಿ ನೀರು ನಿಯಂತ್ರಣಾ ಸಮಿತಿ(ಸಿಡಬ್ಲ್ಯೂಆರ್‌ಸಿ) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ