ಮತ್ತೆ 15 ದಿನ ತ. ನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ರಾಜ್ಯಕ್ಕೆ CWRC ಆದೇಶ

Team Newsnap
1 Min Read

ನವದೆಹಲಿ : ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.

ರಾಜ್ಯದಲ್ಲಿ ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 21 ಟಿಎಂಸಿಗೆ ಇಳಿದಿದೆ. ಆದರೆ ಕಾವೇರಿ ನೀರು ನಿಯಂತ್ರಣಾ ಸಮಿತಿ(ಸಿಡಬ್ಲ್ಯೂಆರ್‌ಸಿ) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ಸ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

Share This Article
1 Comment