ಬಿಪೊರ್‌ಜೊಯ್‌ ಚಂಡಮಾರುತ : ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗಲಿದೆ – IMD ಮುನ್ಸೂಚನೆ

Team Newsnap
1 Min Read

ಅರಬ್ಬಿ ಸಮುದ್ರದಲ್ಲಿ ಬಿಪೊರ್‌ಜೊಯ್‌ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಣಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ಕಿಮೀನಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತಕ್ಕೆ ಮಾನ್ಸೂನ್ ಆಗಮನ

ಮುಂದಿನ 48 ಗಂಟೆಗಳಲ್ಲಿ ಕೇರಳದ ಉಳಿದ ಭಾಗಗಳು, ತಮಿಳುನಾಡು, ಕರ್ನಾಟಕ ಮತ್ತು ಈಶಾನ್ಯದ ಕೆಲವು ಭಾಗಗಳಿಗೆ ಮುಂಗಾರು ಮುಂದುವರಿಯುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.

TAGGED:
Share This Article
Leave a comment