ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಓರ್ವ ಸಜೀವವಾಗಿ ದಹನವಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರಗೊಂಡಿದೆ. ಅಲ್ಲದೇ ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಮನೆಯೊಂದರಲ್ಲಿ ಮಧ್ಯಾಹ್ನ 1.50ರ ಸುಮಾರಿಗೆ ಜರುಗಿದೆ.
ಮಾಗಡಿ ರಸ್ತೆಯ ಆಂಜನೇಯ ಚಿತ್ರ ಮಂದಿರ ಸಮೀಪದಲ್ಲಿನ ಎಂ.ಎಂ ಪುಡ್ ಪ್ಯಾಕ್ಟರಿಯಲ್ಲಿ ಆರು ಜನರು ಕೆಲಸ ಮಾಡುತ್ತಿದ್ದರು.
ಈ ವೇಳೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಓರ್ವ ಸಜೀವವಾಗಿ ದಹನವಾಗಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದಲ್ಲದೇ ಇನ್ನೂ ನಾಲ್ವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ