ಡಿ ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ವಿಜಯನಗರದ ಆದಿಚುಂಚನಗಿರಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಊಹೆಗೂ ಮೀರಿದ ರೀತಿಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿರುವ ಡಿಕೆಶಿಯನ್ನ ಸಿಎಂ ಮಾಡಬೇಕು ಎಂದು ಆಗ್ರಹಿಸಿದರು.
ಶಿವಕುಮಾರ್ ಗೆ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ, ಪಕ್ಷಕ್ಕಾಗಿ ಪಟ್ಟಿರುವ ಶ್ರಮ ಪರಿಗಣಿಸಿ ನಾಡಿನ ಸೇವೆ ಮಾಡಿಕೊಡಲು ಅವಕಾಶ ನೀಡಬೇಕು. ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷ ಉತ್ತಮ ಸೇವೆ ನೀಡಿದ್ದಾರೆ ಎಂದು ಶ್ಲಾಘಿಸಿದರು.