ಬಿಜೆಪಿಯು ತನ್ನ ಪ್ರಚಾರಕ್ಕೆ, ಮಾರ್ಕೆಟ್‌ಗೆ ನನ್ನ, ಸಿದ್ದರಾಮಯ್ಯ ಹೆಸರನ್ನು ಎಲ್ಲಿ ಬೇಕೆಂದರಲ್ಲಿ ಯಥೇಚ್ಛವಾಗಿ ಬಳಸಿಕೊಳ್ಳುತ್ತಿದೆ. ಅವರು ನಮ್ಮ ಬಗ್ಗೆ ಮಾತನಾಡಿದರೆ ಮಾಧ್ಯಮಗಳು ಚೆನ್ನಾಗಿ ಪ್ರಚಾರ ಮಾಡುತ್ತವೆ. ಇಲ್ಲವಾದರೆ ಅವರನ್ನು ತೋರಿಸುವುದಿಲ್ಲ ಎಂದು ಡಿಕೆಶಿ ಬಿಜೆಪಿಯ ವಿರುದ್ಧ ಹರಿಹಾಯ್ದರು.
ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಕೆಲ ವಲಸಿಗ ಬಿಜೆಪಿಯ ಸದಸ್ಯರು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಹೋಗಲು ನಾನು ಕಾರಣ ಎಂದು ಹೇಳಿದ್ದಾರೆ. ಅವರ ಪ್ರಚಾರಕ್ಕೋಸ್ಕರ ಇಂತಹ ತಂತ್ರ ಮಾಡುತ್ತಿದ್ದಾರೆ. ಇಂತಹ ಒಳ್ಳೆ ಸುದ್ದಿ ನೀಡಿದ ಅವರಿಗೆ ಶುಭವಾಗಲಿ’ ಎಂದು ಕಿಡಿ ಕಾರಿದ್ದಾರೆ.
ಉಪ ಚುಣಾವಣಾ ಪ್ರಚಾರದ ಸಮಯದಲ್ಲಿ ಜಾತಿಯನ್ನು ಬಳಸಿಕೊಳ್ಳುವ ಆರೋಪದ ಕುರಿತು ಮಾತನಾಡಿದ ಅವರು ‘ಉಪ ಚುಣಾವಣೆಯಲ್ಲಿ ನಾನು ಜಾತಿ ಕಾರ್ಡ್ ಬಳಸಿ ಮತ ಸೆಳೆಯುವ ತಂತ್ರ ಮಾಡುತ್ತಿದ್ದೇನೆ ಎಂದು ಬಿಜೆಪಿ ನನ್ನ ಮೇಲೆ ಆರೋಪ ಮಾಡುತ್ತಿದೆ. ಈಗ ಅದೇ ಬಿಜೆಪಿ ನನ್ನ ಮೇಲೆ ಟೀಕೆ ನಡೆಸಲು ಮಂತ್ರಿ ಮಂಡಲದಲ್ಲಿರುವ ಒಕ್ಕಲಿಗ ಮುಖಂಡರಾದ ಅಶ್ವತ್ಥ್ ನಾರಾಯಣ್, ಅಶೋಕ್, ಸೋಮಶೇಖರ್, ಸಿ.ಟಿ ರವಿ ಅವರನ್ನು ಕಾಂಗ್ರೆಸ್ ಮೇಲೆ ಛೂ ಬಿಟ್ಟು ಯಾವ ತಂತ್ರ ಅನುಸರಿಸುತ್ತಿದೆ?’ ಎಂದು ಪ್ರಶ್ನಿಸಿದರು.
ಪ್ರವಾಹ ನಿರ್ವಹಣೆ ಮಾಡಿಲ್ಲ
ಪ್ರವಾಹದ ಸಂದರ್ಭವನ್ನು ಸರ್ಕಾರ ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿದ ಡಿಕೆಶಿ ‘
ಬಡವರ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲು ಯಾರಿಗೂ ಆಸಕ್ತಿ ಇಲ್ಲ. ಮುಖ್ಯಮಂತ್ರಿಗಳು ಕೇವಲ ಆಶ್ವಾಸನೆ ನೀಡುತ್ತಿದ್ದಾರೆ. ಕಳೆದ ವರ್ಷ ನೆರೆ ಸಮಯದಲ್ಲೂ ಕೇವಲ ಆಶ್ವಾಸನೆ ಕೊಟ್ಟರು. ಆದರೆ ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಸರ್ಕಾರದ ಆದ್ಯತೆ ಕೇವಲ ಚುನಾವಣೆಯೇ ಹೊರತು ನೆರೆ ಸಂತ್ರಸ್ತರಲ್ಲ’ ಎಂದು ಗುಡುಗಿದರು.
ಇದೇ ವೇಳೆ ಮುಂದಿನ ಚುಣಾವಣೆಯಲ್ಲಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಆಕಾಂಕ್ಷಿ ಯಾರೆಂಬುದರ ಬಗ್ಗೆ ಮಾತನಾಡಿದ ಅವರು ‘ಚುನಾವಣೆ ಸಮಯ ಬರಲಿ, ಆಗ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡೋಣ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಬೇಕು. ನಮಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ’ ಎಂದರು.
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ