ನವದೆಹಲಿ: ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಸೂಪರ್ ಸ್ಟಾರ್ ರಜಿನಿಕಾಂತ್ ಅವರಿಗೆ ನೀಡಿ ಗೌರವಿಸಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಜಿನಿಗೆ ದಾದಾ ಸಾಹೇಬ್ ಪಾಲಿಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಈ ವೇಳೆ ಮಾತನಾಡಿದ ರಜಿನಿಕಾಂತ್, ಈ ಪ್ರಶಸ್ತಿಯನ್ನು ನನ್ನ ಗುರುಗಳಾದ ಕೆ.ಬಾಲಚಂದರ್ ಅವರಿಗೆ ಅರ್ಪಿಸುತ್ತೇನೆ. ಅಲ್ಲದೇ ಈ ವೇಳೆ ತಂದೆ ಸ್ಥಾನದಲ್ಲಿ ನಿಂತು ನನ್ನನ್ನು ಬೆಳೆಸಿದ, ಆಧ್ಯಾತ್ಮದಲ್ಲಿ ಆಸಕ್ತಿ ಮೂಡಿಸಿದ ನನ್ನ ಅಣ್ಣ ಸತ್ಯನಾರಾಯಣ್ ಗಾಯಕ್ವಾಡ್ ಹಾಗೂ ಕರ್ನಾಟಕದ ನನ್ನ ಸ್ನೇಹಿತ ಮತ್ತು ಬಸ್ ಚಾಲಕ ರಾಜ್ ಬಹದ್ದೂರ್ಗೆ ಅರ್ಪಿಸುತ್ತೇನೆ ಎಂದರು
ಅವರು ನನ್ನ ಪ್ರತಿಭೆಯನ್ನು ಗುರುತಿಸಿದ ಮೊದಲ ವ್ಯಕ್ತಿ. ಆರಂಭದಲ್ಲಿ ಅವರು ನನ್ನನ್ನು ಪ್ರೋತ್ಸಾಹಿಸಿದರು ಎಂದು ಹೇಳಿದ್ದಾರೆ. ವಿಶೇಷವೆಂದರ ತಮ್ಮ ಭಾಷಣದಲ್ಲಿ ಕೇವಲ ಈ ಮೂವರ ಹೆಸರು ಮಾತ್ರ ಹೇಳಿದ ರಜಿನಿಕಾಂತ್, ತಮಿಳುಜನರಿಗೂ ಧನ್ಯವಾದ ಅರ್ಪಿಸಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ