ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ ಗೆ 2020 ಸಾಲಿನ‌ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ

Team Newsnap
1 Min Read

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮ ಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಪ್ರಕಟವಾಗಿದೆ.

ದಕ್ಷಿಣ ಭಾರತದ ಖ್ಯಾತ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್ ಮತ್ತು ನಾಗಾರ್ಜುನ ಅಕ್ಕಿನೇನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರೆತಿದೆ.

ಶ್ರೀಮನ್ನಾನಾರಾಯಣನಿಗೆ ಪ್ರಶಸ್ತಿ:

  • ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ರಕ್ಷಿತ್ ಶೆಟ್ಟಿ ಪಾಲಾಗಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ.
  • ನಟಿ ತಾನ್ಯಾ ಹೋಪ್ ಅವರಿಗೆ ಯಜಮಾನ ಚಿತ್ರದ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.
  • ಅತ್ಯುತ್ತಮ ಸಿನಿಮಾ ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ.
  • ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಡೆದಿಕೊಂಡಿದ್ದಾರೆ.
  • ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ವಿ ಹರಿಕೃಷ್ಣ ಪಾಲಾಗಿದೆ.

ತಮಿಳಿನಲ್ಲಿ ಯಾರಿಗೆ ?

ಇನ್ನು ತಮಿಳು ಚಿತ್ರರಂಗದ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿಗೆ ಕುಮಾರ್, ಅತ್ಯುತ್ತಮ ನಟ ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಜ್ಯೋತಿಕಾಗೆ ದೊರೆತಿದೆ.

ತೆಲುಗಿನಲ್ಲಿ ಯಾರಿಗೆ ?

ಅತ್ಯುತ್ತಮ ತೆಲುಗು ನಟ ಪ್ರಶಸ್ತಿ ನವೀನ್ ಪಾಲಿಶೆಟ್ಟಿಗೆ ದೊರೆತಿದೆ. ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ಅತ್ಯುತ್ತಮ ಸಿನಿಮಾ ಜೆರ್ಸಿಗೆ ದೊರೆತಿದೆ.

ಮಲಯಾಳಂ ನಲ್ಲಿ ಯಾರಿಗೆ ?

ಅತ್ಯುತ್ತಮ ಮಲಯಾಳಂ ನಟ ಸೂರಜ್ ವೆಂಜರಮೂಡು ಅವರಿಗೆ ದೊರೆತಿದೆ. ಅತ್ಯುತ್ತಮ ನಟಿ ಪಾರ್ವತಿ ತಿರುವೊತ್ತು ಪಾಲಾಗಿದೆ.

ಪ್ರಶಸ್ತಿ ಪ್ರದಾನದ ಸಮಾರಂಭವು ಎಲ್ಲಿ? ಯಾವಾಗ ? ಎಂಬುದರ ಬಗ್ಗೆ ಮಾಹಿತಿ ಇಲ್ಲ

Share This Article
Leave a comment