Karnataka

ಮಂಡ್ಯ : ದಕ್ಷಿಣ ಪದವೀಧರ ಕ್ಷೇತ್ರ ದ ಚುನಾವಣೆ- ಶೇ. 91.60 ರಷ್ಟು ಮತದಾನ

ಮಂಡ್ಯ : ವಿಧಾನಪರಿಷತ್ ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಜಿಲ್ಲೆಯಲ್ಲಿ ಶೇ 91.60 ರಷ್ಟು ನಡೆದಿದೆ.

ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.

ಮಂಡ್ಯ ಜಿಲ್ಲೆಯಲ್ಲಿ 5403 ಮತದಾರರ ಪೈಕಿ 4949 ಮತದಾರರು ಹಕ್ಕು ಚಲಾಯಿಸಿದ್ದು ಅತ್ಯಧಿಕ ಮತದಾನ ನಡೆದಿದೆ.

ಜಿಲ್ಲೆಯ 9 ಮತಗಟ್ಟೆಗಳಲ್ಲಿ ಬೆಳಿಗ್ಗೆ ಮತದಾನ ಆರಂಭದ ಸಂದರ್ಭದಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಹೊತ್ತು ಕಳೆದಂತೆ ಮತಗಟ್ಟೆಯತ್ತ ಮತದಾರರು ಆಗಮಿಸಿ ಹಕ್ಕು ಚಲಾಯಿಸಿದರು.

ಮತಗಟ್ಟೆಯ ಹೊರಭಾಗದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ನಿರತರಾಗಿ ಮತಯಾಚಿಸಿದರು .

ಜಿಲ್ಲಾ ಕೇಂದ್ರ ಮಂಡ್ಯ ನಗರದ ತಾಲೂಕು ಕಚೇರಿಯ ಎರಡು ಮತ ಕೇಂದ್ರ ಮತ್ತು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತೆರೆದಿರುವ ಮತಗಟ್ಟೆಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು, ಪಿಯು ಹಾಗೂ ಪದವಿ ಕಾಲೇಜುಗಳ ಉಪನ್ಯಾಸಕರು, ಪ್ರಾಧ್ಯಾಪಕರು, ವಿಶ್ವವಿದ್ಯಾಲಯಗಳ ಬೋಧಕರು ತಮ ಪ್ರಾಶಸ್ತ್ರದ ಮತ ಹಾಕಿದರು.

ತಾಲೂಕು ಕೇಂದ್ರಗಳಾದ ಮಳವಳ್ಳಿ, ಮದ್ದೂರು, ನಾಗಮಂಗಲ, ಪಾಂಡವಪುರ ಕೆ ಆರ್ ಪೇಟೆ ಹಾಗೂ ಶ್ರೀರಂಗಪಟ್ಟಣದ ಮಿನಿ ವಿಧಾನಸೌಧದ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು,ಸುಶಿಕ್ಷಿತ ಮತದಾರರು ಮತಗಟ್ಟೆಗಳ ಎದುರು ಸರದಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುವ ಮೂಲಕ ಮತದ ಮಹತ್ವ ಸಾರಿದ್ದಾರೆ.ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ ,ಓರ್ವ ವೃದ್ಧೆ ಸಾವು

ಕ್ಷೇತ್ರ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಒಟ್ಟಾರೆ 11,998 ಪುರುಷರು, 9,550 ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 21,549 ಮತದಾರರು ಇದ್ದು ಈ ಪೈಕಿ ಮೈಸೂರು-10,439, ಚಾಮರಾಜನಗರ-2,181, ಹಾಸನ- 3,526, ಮಂಡ್ಯ ಜಿಲ್ಲೆಯಲ್ಲಿ 5403 ಸುಶಿಕ್ಷಿತರು ಮತ ಹಕ್ಕು ಹೊಂದಿದ್ದರು,
ಕಾಂಗ್ರೆಸ್‌ನ ಮರಿತಿಬ್ಬೇಗೌಡ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ, ನಾಗೇಂದ್ರ ಬಾಬು (ಕೆಜೆಪಿ), ಮಾಜಿ ಶಾಸಕ ವಾಟಾಳ್ ನಾಗರಾಜ್ (ಕನ್ನಡ ಚಳವಳಿ ವಾಟಾಳ್ ಪಕ್ಷ), ಹಾಗೂ ಪಕ್ಷೇತರರಾದ ಅನಿಲ್ ಕುಮಾರ್, ಅಂಬರೀಷ್‌, ನಿವೃತ್ತ ಡಿಡಿಪಿಯು ನಾಗಮಲ್ಲೇಶ್‌, ನಿಂಗರಾಜು ಎಸ್, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ, ಬಿಎಸ್ಪಿ ಬೆಂಬಲಿತ ಅಭ್ಯರ್ಥಿ ಆ‌ರ್. ಮಹೇಶ್‌, ರಾಜು ಕೆ.ರವರ ರಾಜಕೀಯ ಭವಿಷ್ಯದ ಹಣೆಬರಹ ಬರೆದಿದ್ದಾರೆ ಜೂನ್ 6 ರಂದು ಫಲಿತಾಂಶ ಹೊರ ಬಿಳಲಿದೆ.

Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024