ಸ್ಮಶಾನದಲ್ಲಿ ದಲಿತ ಮಹಿಳೆಯೊಬ್ಬಳ ಅಂತ್ಯಸಂಸ್ಕಾರಕ್ಕೆ ಮೇಲ್ವರ್ಗದ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಪ್ರಸಂಗ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ಜರುಗಿದೆ.
ಈ ಘಟನೆಯಿಂದ ನೊಂದ ದಲಿತ ಕುಟುಂಬ ಗ್ರಾಮಪಂಚಾಯತಿ ಎದುರು ಅಂತ್ಯ ಸಂಸ್ಕಾರ ಮಾಡಲು ಮುಂದಾಗಿದ್ದಾರೆ.
ಗ್ರಾಮದ ದಲಿತ ಕುಟುಂಬದ ಹನುಮವ್ವ ಅಣ್ಣಿಗೇರಿ ಎಂಬ ಹಿರಿಯ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಅಂತ್ಯಸಂಸ್ಕಾರ ಮಾಡಲು ಕುಟುಂಬದ ಸದಸ್ಯರು ಸ್ಮಶಾನಕ್ಕೆ ಕಟ್ಟಿಗೆ ತೆಗೆದುಕೊಂಡು ಹೋಗುವ ಸಮಯದಲ್ಲಿ ಮೇಲ್ವರ್ಗದ ವ್ಯಕ್ತಿಯೋರ್ವ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ.
ಸ್ಮಶಾನ ನಮ್ಮ ಹೆಸರಿನಲ್ಲಿದೆ ನೀವು ಇಲ್ಲಿ ಅಂತ್ಯಸಂಸ್ಕಾರ ಮಾಡ ಬಾರದು ಎಂದು ತಾಕೀತು ಮಾಡಿದ್ದಾನೆ.
ಈ ಘಟನೆಯಿಂದ ಕಂಗಾಲಾದ ಕುಟುಂಬಸ್ಥರು ಗ್ರಾಮ ಪಂಚಾಯತಿ ಮುಂದೆ ಅಂತ್ಯಸಂಸ್ಕಾರ ಮಾಡಲು ಮುಂದಾಗಿದ್ದಾರೆ.
ನಂತರ ಸ್ಥಳಕ್ಕೆ ಆಗಮಿಸಿದ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಗ್ರಾಮದ ಜನರನ್ನು ಮನವೊಲಿಸುವ ಮೂಲಕ ಮತ್ತೆ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ