ರಾಜ್ಯದಲ್ಲಿ ಜೂನ್ ನಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಮೇ ತಿಂಗಳಿನಲ್ಲಿಯೇ ಮುಂಗಾರು ಪೂರ್ವ ಗಾಳಿ ಮಳೆಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಡಿಸಿ ಸಿಇಓಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಈ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದು ಸಿಎಂ ಎಚ್ಚರಿಸಿದರು.
ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರಳಿ ಬಿದ್ದರೆ ಕೂಡಲೇ ಅವುಗಳನ್ನು ತೆರವು ಗೊಳಿಸಬೇಕು. ಟ್ರಾನ್‌ಫಾರ್ಮರ್, ಸೇತುವೆ ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಹಳ್ಳಿಗಳಿಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ.
ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಒಂದು ವೇಳೆ ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು.
ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಒಂದು ವೇಳೆ ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳು, ಸಿಇಒ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ವಾರ್ನಿಂಗ್
ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
- ಎಲ್ಲಾ ಶಾಸಕರ ಕ್ಷೇತ್ರಗಳಿಗೆ ₹2,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ