Karnataka

ಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಕ್ರಮ ವಹಿಸಿ: ಡಿಸಿ, ಸಿಇಒಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಜೂನ್ ನಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಮೇ ತಿಂಗಳಿನಲ್ಲಿಯೇ ಮುಂಗಾರು ಪೂರ್ವ ಗಾಳಿ ಮಳೆಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಡಿಸಿ ಸಿಇಓಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಈ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದು ಸಿಎಂ ಎಚ್ಚರಿಸಿದರು.

ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರಳಿ ಬಿದ್ದರೆ ಕೂಡಲೇ ಅವುಗಳನ್ನು ತೆರವು ಗೊಳಿಸಬೇಕು. ಟ್ರಾನ್‌ಫಾರ್ಮರ್‌, ಸೇತುವೆ ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಹಳ್ಳಿಗಳಿಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ.

ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಒಂದು ವೇಳೆ ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು.

ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಒಂದು ವೇಳೆ ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು, ಸಿಇಒ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ವಾರ್ನಿಂಗ್

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024