ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು

Team Newsnap
1 Min Read
damage to sangolli rayanna statue due to stones thrown at statue

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿ ಅಪಚಾರ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಜರುಗಿದೆ

ಇದನ್ನು ಓದಿ –ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು

ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸೇರಿದ್ದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಯಣ್ಣನ ಮೂರ್ತಿಗೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಘಟನೆಯಿಂದ ಬೆಂಡಿಗೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

Share This Article
Leave a comment