ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 7 ರಂದು ಆರಂಭವಾಗಿ, ಅಕ್ಟೋಬರ್ 15 ರಂದು ಜಂಬೂಸವಾರಿ ಜರುಗಲಿದೆ.
ದಸರಸ ಆಚರಣೆ 2021 ಸಂಬಂಧ ಬೆಂಗಳೂರಿನ ವಿಧಾನ ಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಪೂರ್ವಸಭೆ ಸಭೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತು ಚರ್ಚೆ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ರಾಜ್ಯದಲ್ಲಿ ಕೊರೋನಾ ತೀವ್ರವಾಗಿ ಹರಡುತ್ತಿದೆ. ಹೀಗಾಗಿ ಈ ವರ್ಷವೂ ಸರಳವಾಗಿ ದಸರಾ ಆಚರಣೆಗೆ ತೀರ್ಮಾನಿಸಿದ್ದೇವೆ ಎಂದರು.
ಅಕ್ಟೋಬರ್ 7ನೇ ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 15ರಂದು ದಸರಾ ಜಂಬೂ ಸವಾರಿ ಮಾಡಲಿದ್ದೇವೆ. ದಸರಾ ಆಚರಣೆಗೆ ಸರ್ಕಾರದಿಂದ ₹ 6 ಕೋಟಿ ರು ಬಿಡುಗಡೆ ಮಾಡಲಾಗಿದೆ ಎಂದರು.
ಮತ್ತೊಮ್ಮೆ ಸಭೆ ನಡೆಸಿ ಗಣ್ಯರ ಆಹ್ವಾನ ಕುರಿತು ಚರ್ಚೆ ನಡೆಸಲಿದ್ದೇವೆ. ದೀಪಾಲಂಕಾರದ ಹೊಣೆ ಇಂಧನ ಸಚಿವರು ಒಪ್ಪಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 9 ದಿನದ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು