December 22, 2024

Newsnap Kannada

The World at your finger tips!

701564d5 514d 4b5e 97ee 4c1c21689931

ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ – ಉನ್ನತ ಸಮಿತಿ ನಿರ್ಧಾರ

Spread the love

ಬೆಂಗಳೂರು

ಈ ಬಾರಿಯ ನಾಡಹಬ್ಬ ದಸರಾ ವೈಭವ ಇಲ್ಲ. ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕರೊನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಆಹಾರ ಮೇಳ, ಕ್ರೀಡೆ, ಯುವದಸರಾ, ಸಾಂಸ್ಕೃತಿಕ ದಸರ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಇರುವುದಿಲ್ಲ. ಅಲ್ಲದೆ ಈ ಮೊದಲು
10-12 ಆನೆಗಳು ಭಾಗವಹಿಸುತ್ತಿದ್ದ ಅದ್ದೂರಿ ನಾಡಹಬ್ಬದ ಆಚರಣೆಯಲ್ಲಿ ಈ ಬಾರಿ ಗಜಪಡೆಯನ್ನು ಕನಿಷ್ಟ 5 ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು.

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸುತ್ತಿರುವ ಕರೋನ ವಾರಿಯರ್ಸ್‌ ಅವರಿಂದ ನೆರವೇರಿಸಲು ತೀರ್ಮಾನಿಸಲಾಯಿತು.

ಅರಮನೆ ಆವರಣದಲ್ಲೇ ಜಂಬೂ ಸವಾರಿ

ದಸರಾ ಆಚರಣೆಗೆ 10 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುವುದಲ್ಲದೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು ಮತ್ತು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು.

ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿ ಬಿ ಶರತ್‌ ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!