ಬಿಬಿಎಂಪಿಯ 198 ವಾರ್ಡ್ ಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೂಡ ನೀಡಿದೆ,ಬೆಂಗಳೂರಿನ 198 ವಾರ್ಡ್ ಗಳಿಗೆ ಮೀಸಲಾತಿ ಪ್ರಕಾರವೇ ಎರಡು ವಾರಗಳಲ್ಲೇ ಚುನಾವಣೆ ಘೋಷಣೆ ಮಾಡುವ ಹೊಣೆ ಚುನಾವಣಾ ಆಯೋಗದ ಮೇಲಿದೆ.
ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಕರ್ನಾಟಕ ಮಟ್ಟಿಗೆ ಮಹತ್ವದ ಬೆಳವಣಿಗೆಯಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮದ್ಯಪ್ರದೇಶ ವರ್ಸಸ್ ಸುರೇಶ್ ಮಹಾಜನ್ ಕೇಸ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧದ ತೀರ್ಪಿನಲ್ಲಿ ಬಿಬಿಎಂಪಿ ಚುನಾವಣೆಗೆ ನಡೆಸೋದಕ್ಕೂ ಅನುಮತಿ ನೀಡಿದೆ ಎಂದರು.
ಈ ಪ್ರಕರಣದಲ್ಲಿ. ತ್ರೀ ಸದಸ್ಯ ಪೀಠದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಪ್ರತ್ಯೇಕ ಕೇಸ್ ಮತ್ತು ಲೀಸ್ಟ್ ಆಗಲು ಮೂರು ತಿಂಗಳು ಕಾಲಾವಕಾಶವಿತ್ತು ಮಧ್ಯಪ್ರದೇಶ ಆದೇಶ ಆದ್ರೂ, ಎಲ್ಲಾ ರಾಜ್ಯಕ್ಕೂ ಅನ್ವಯ ಅಂತ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಹೀಗಾಗಿ ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು ಅಂತ ಹೇಳಲಾಗಿದೆ ಎಂದರು.
ಎರಡು ವಾರದಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಆಗಬೇಕಿದೆ ಎಂದರು.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು