ಲಾಲುಗೆ ಕಿಡ್ನಿ ನೀಡಲು ಒಪ್ಪಿದ ಪುತ್ರಿ – ನವೆಂಬರ್ ಕೊನೆಗೆ ಸಿಂಗಾಪುರ್ ಗೆ RJD ಮುಖ್ಯಸ್ಥ

Team Newsnap
1 Min Read
Daughter agreed to donate kidney to Lalu – RJD chief to Singapore at the end of Nov ಲಾಲುಗೆ ಕಿಡ್ನಿ ನೀಡಲು ಒಪ್ಪಿದ ಪುತ್ರಿ – ನವೆಂಬರ್ ಕೊನೆಗೆ ಸಿಂಗಾಪುರ್ ಗೆ RJD ಮುಖ್ಯಸ್ಥ

ಮೂತ್ರಪಿಂಡವೂ ಸೇರಿದಂತೆ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಪುತ್ರಿ ರೋಹಿಣಿ ಆಚಾರ್ಯ ತಮ್ಮ ಕಿಡ್ನಿಯಲ್ಲಿ ಒಂದನ್ನು ದಾನ ಮಾಡಲು ನಿರ್ಧರಿಸಿದ್ದಾರೆ.

ಸಿಂಗಾಪುರಕ್ಕೆ ಭೇಟಿ ಕೊಟ್ಟ ಲಾಲು ಪ್ರಸಾದ್ ಯಾದವ್ ಅವರಿಗೆ, ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು. ಈ ಬಳಿಕ ರೋಹಿಣಿ ಅವರು ಮೂತ್ರಪಿಂಡವನ್ನು ತನ್ನ ತಂದೆಗೆ ದಾನ ಮಾಡಲು ಮುಂದಾಗಿದ್ದಾರೆ. ಕಡಿಮೆ ಅಂಕ ಬಂದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ತಮ್ಮ ಜೀವವನ್ನು ಉಳಿಸಿಕೊಳ್ಳಲು ಮೊದಲಿಗೆ ರೋಹಿಣಿ ಕಿಡ್ನಿಯನ್ನು ಪಡೆಯಲು ಲಾಲು ಪ್ರಸಾದ್ ಒಪ್ಪಿಕೊಳ್ಳಲಿಲ್ಲ. ಆದರೆ ಆಕೆಯ ಮತ್ತು ಕುಟುಂಬಸ್ಥರ ಒತ್ತಡದ ಮೇರೆಗೆ ಕೊನೆಗೆ ಕಿಡ್ನಿ ಪಡೆಯಲು ಒಪ್ಪಿಕೊಂಡಿದ್ದಾರೆ. ನವೆಂಬರ್ 20 ರಿಂದ 24ರ ಒಳಗೆ ಲಾಲು ಅವರು ಮತ್ತೆ ಸಿಂಗಾಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ, ಈ ಸಮಯದಲ್ಲಿ ಅವರು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ.

ಲಾಲು ಪ್ರಸಾದ್ ಎರಡನೇ ಪುತ್ರಿ ರೋಹಿಣಿ ಸಿಂಗಾಪುರದಲ್ಲಿ ನೆಲೆಸಿದ್ದಾರೆ, ತಮ್ಮ ತಂದೆಗೆ ಮೂತ್ರಪಿಂಡ ಕಾಯಿಲೆ ಸಮಸ್ಯೆ ಇರುವ ಬಗ್ಗೆ ಬಹಳ ಆತಂಕಕ್ಕೊಳಗಾಗಿದ್ದರು.

ಮೂತ್ರಪಿಂಡ ಕಸಿ ಸಲಹೆ ನೀಡಿದ ವೈದ್ಯರ ತಂಡವನ್ನು ಸಂಪರ್ಕಿಸಲು ಲಾಲು ಪ್ರಸಾದ್ ಅವರು ಸಿಂಗಾಪುರಕ್ಕೆ ಭೇಟಿ ನೀಡಿದ್ದರು.

ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಗೆ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್‍ಗೆ ಎಐಐಎಂಎಸ್‍ನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳಲು ಸಲಹೆ ನೀಡಿರಲಿಲ್ಲ. ಆದರೆ ಸಿಂಗಾಪುರಕ್ಕೆ ಭೇಟಿ ನೀಡಿದ ಲಾಲು ಅವರಿಗೆ ಅಲ್ಲಿನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

Share This Article
Leave a comment