ದಾವಣಗೆರೆ : ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ಅತ್ತೆ, ಮಾವನ ಮೇಲಿನ ಸಿಟ್ಟಿನಿಂದ ಸೊಸೆಯೊಬ್ಬಳು ಅಡಿಕೆ ಮರಗಳನ್ನೇ ಕಡಿದು ಹಾಕಿದ ಘಟನೆ ನಡೆದಿದೆ.
ಅಡಿಕೆ ಮರಗಳನ್ನು ಕಡಿದು ಹಾಕಿದ ರೂಪಾ ಕುಮಾರಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಚಿದಾನಂದ ಸ್ವಾಮಿ ದಂಪತಿಯಹಿರಿಯ ಪುತ್ರ ಕುಮಾರಸ್ವಾಮಿಯನ್ನು ರೂಪಾಳೊಂದಿಗೆ ಮದುವೆ ಮಾಡಿಸಲಾಗಿದ್ದು , ಹಲವಾರು ಬಾರಿ ಆಸ್ತಿಯಲ್ಲಿ ಪಾಲು ಕೇಳಿತ್ತಿದ್ದ ಸೊಸೆ ರೂಪಾ ಅತ್ತೆ, ಮಾವನ ಮೇಲಿದ್ದ ಸಿಟ್ಟಿಗೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ನಾಶ ಮಾಡಿದ್ಧಾಳೆ.
ವಯಸ್ಸಾಗಿರುವ ನಮ್ಮನ್ನ ಸರಿಯಾಗಿ ನೋಡಿಕೊಳ್ಳದೆ ಸೊಸೆ ನಮ್ಮ ಮೇಲೆ ಹಲ್ಲೆ ಮಾಡುತ್ತಿದ್ದಾಳೆ ಮತ್ತು ಅಡಿಕೆ ಮರಗಳನ್ನು ಕಡಿದು ಹಾಕಿದ್ದಾಳೆ ಎಂದು ಆರೋಪಿಸಿ ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚಿದಾನಂದ ಸ್ವಾಮಿಯವರು ದೂರು ದಾಖಲಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು