ಇದನ್ನು ಓದಿ –ಲಾಹೋರ್‌ನ ಎಟಿಎಂಗಳಲ್ಲಿ ಹಣ, ಬಂಕ್‌ಗಳಲ್ಲಿ ಪೆಟ್ರೋಲ್ ಖಾಲಿ ಖಾಲಿ – ಮಾಜಿ ಕ್ರಿಕೆಟಿಗ ಹಫೀಜ್ ಟ್ವೀಟ್!
ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ.
ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ಮೆ.ಲುಲು ಗ್ರೂಪ್ ಇಂಟರ್ ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.
2022 ರ ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು