ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ

Team Newsnap
1 Min Read
Davos Tour Successful: Agreement of Rs 52,000 crore

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ . ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

ಇದನ್ನು ಓದಿ –ಲಾಹೋರ್‌ನ ಎಟಿಎಂಗಳಲ್ಲಿ ಹಣ, ಬಂಕ್‌ಗಳಲ್ಲಿ ಪೆಟ್ರೋಲ್ ಖಾಲಿ ಖಾಲಿ – ಮಾಜಿ ಕ್ರಿಕೆಟಿಗ ಹಫೀಜ್ ಟ್ವೀಟ್!

ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ.

ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ಮೆ.ಲುಲು ಗ್ರೂಪ್ ಇಂಟರ್ ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.

2022 ರ ನವೆಂಬರ್‍ ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.

Share This Article
Leave a comment