ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ದಾವೋಸ್ ಪ್ರವಾಸ ಮುಗಿಸಿದ ನಂತರ ಶುಕ್ರವಾರ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಗುಪ್ತಚರ ವಿಭಾಗದ ಮುಖ್ಯಸ್ಥ ಎಡಿಜಿಪಿ ದಯಾನಂದ್, ಇಂಧನ ಸಚಿವ ಸುನೀಲ್ ಕುಮಾರ್, ನಗರ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಸ್ವಾಗತಿಸಿದರು.
ಇದನ್ನು ಓದಿ –ಮದ್ಯದ ದರ ಅಗ್ಗ ಮಾಡಲು ರಾಜ್ಯ ಸರ್ಕಾರದ ಚಿಂತನೆ : ನೆರೆ ರಾಜ್ಯಗಳ ಮಾರಾಟ ದರ ಅಧ್ಯಯನಕ್ಕೆ 5 ತಂಡ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಾವೋಸ್ ಭೇಟಿ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಸಹಕಾರಿಯಾಗಿದೆ,ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ. ಹಲವಾರು ಕಂಪನಿಗಳಿಂದ ಬಂಡವಾಳ ಹೂಡಿಕೆಗೆ ಆಸಕ್ತಿ, ದಾವೋಸ್ ನಲ್ಲಿ ಹೂಡಿಕೆ ಆಕರ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಪ್ರಯತ್ನ ಯಶಸ್ವಿಯಾಗಿದೆ. ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.
ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲದಾಯಕವಾಗಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜತೆ ಒಟ್ಟು 52 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಇನ್ನೂ ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ.
ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ.ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ.
ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು,ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದದ ಜೊತೆ ಒಪ್ಪಂದ ಮಾಡಿಕೊಂಡಿದೆ. ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲುಗಲ್ಲು.
ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ, ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ ಹಾಗೂ ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹ,ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಲಾಭಗಳನ್ನು ಪಡೆದುಕೊಳ್ಳಬಹುದಾಗಿದೆ,ಎಂದು ಮುಖ್ಯಮಂತ್ರಿಗಳು ತಿಳಿಸಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ