Main News

ದಾವೋಸ್ ಪ್ರವಾಸ ಯಶಸ್ವಿ : 52 ಸಾವಿರ ಕೋಟಿ ರೂ ಮೊತ್ತದ ಬಂಡವಾಳ ಒಪ್ಪಂದ

ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ದಾವೋಸ್‌ ಪ್ರವಾಸ ಮುಗಿಸಿದ ನಂತರ ಶುಕ್ರವಾರ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಗುಪ್ತಚರ ವಿಭಾಗದ ಮುಖ್ಯಸ್ಥ ಎಡಿಜಿಪಿ ದಯಾನಂದ್‌, ಇಂಧನ ಸಚಿವ ಸುನೀಲ್‌ ಕುಮಾರ್‌, ನಗರ ಪೊಲೀಸ್‌ ಕಮೀಷನರ್‌ ಪ್ರತಾಪ್‌ ರೆಡ್ಡಿ ಸ್ವಾಗತಿಸಿದರು.

ಇದನ್ನು ಓದಿ –ಮದ್ಯದ ದರ ಅಗ್ಗ ಮಾಡಲು ರಾಜ್ಯ ಸರ್ಕಾರದ ಚಿಂತನೆ ‌: ನೆರೆ ರಾಜ್ಯಗಳ ಮಾರಾಟ ದರ ಅಧ್ಯಯನಕ್ಕೆ 5 ತಂಡ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಾವೋಸ್‌ ಭೇಟಿ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಸಹಕಾರಿಯಾಗಿದೆ,ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ. ಹಲವಾರು ಕಂಪನಿಗಳಿಂದ ಬಂಡವಾಳ ಹೂಡಿಕೆಗೆ ಆಸಕ್ತಿ, ದಾವೋಸ್ ನಲ್ಲಿ ಹೂಡಿಕೆ ಆಕರ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಪ್ರಯತ್ನ ಯಶಸ್ವಿಯಾಗಿದೆ. ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.

ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲದಾಯಕವಾಗಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜತೆ ಒಟ್ಟು 52 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಇನ್ನೂ ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ.

ಮುಂದಿನ‌ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ.ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. 

ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು,ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದದ ಜೊತೆ ಒಪ್ಪಂದ ಮಾಡಿಕೊಂಡಿದೆ. ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲುಗಲ್ಲು.

ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ, ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ ಹಾಗೂ ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹ,ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಲಾಭಗಳನ್ನು ಪಡೆದುಕೊಳ್ಳಬಹುದಾಗಿದೆ,ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024