ಡಿಸಿ ರೋಹಿಣಿ- ಜನಪ್ರತಿನಿಧಿಗಳ ಗುದ್ದಾಟಕ್ಕೆ ಬಲಿಯಾದ ಜನಸ್ಪಂಧನ ಕಾರ್ಯಕ್ರಮ!

Team Newsnap
1 Min Read

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ಗುದ್ದಾಟದ ಹಿನ್ನೆಲೆಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಆರ್ ಅಶೋಕ್, ಜನಸ್ಪಂದನ ಕಾರ್ಯಕ್ರಮ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನನ್ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಜನಪ್ರತಿನಿಧಿಗಳ ಜೊತೆ ಹೇಗೆ ವರ್ತಿಸಬೇಕು ಎಂಬುದನ್ನು ಅವರಿಗೆ ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಎಂಬುದನ್ನು ಸಹ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ನಡುವಣ ಸಂಘರ್ಷದ ಹಿನ್ನೆಲೆಯಲ್ಲಿ, ಗೊಂದಲ ಏರ್ಪಟ್ಟಿದೆ. ಇದೇ ಕಾರಣಕ್ಕಾಗಿ ಜನಸ್ಪಂದನ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿರುವ ಅಶೋಕ್, ಕಾರ್ಯಕ್ರಮದಲ್ಲಿ ಜನರ ಅಹವಾಲಗಳನ್ನು ಕೇಳಲಾಗುತ್ತದೆ ಎಂದು ಹೇಳಿದ್ದಾರೆ.

Share This Article
Leave a comment