ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ಗುದ್ದಾಟದ ಹಿನ್ನೆಲೆಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಆರ್ ಅಶೋಕ್, ಜನಸ್ಪಂದನ ಕಾರ್ಯಕ್ರಮ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನನ್ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಜನಪ್ರತಿನಿಧಿಗಳ ಜೊತೆ ಹೇಗೆ ವರ್ತಿಸಬೇಕು ಎಂಬುದನ್ನು ಅವರಿಗೆ ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಎಂಬುದನ್ನು ಸಹ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ನಡುವಣ ಸಂಘರ್ಷದ ಹಿನ್ನೆಲೆಯಲ್ಲಿ, ಗೊಂದಲ ಏರ್ಪಟ್ಟಿದೆ. ಇದೇ ಕಾರಣಕ್ಕಾಗಿ ಜನಸ್ಪಂದನ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಜನಸ್ಪಂದನ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿರುವ ಅಶೋಕ್, ಕಾರ್ಯಕ್ರಮದಲ್ಲಿ ಜನರ ಅಹವಾಲಗಳನ್ನು ಕೇಳಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
This website uses cookies.
Leave a Comment