December 22, 2024

Newsnap Kannada

The World at your finger tips!

nugu

ಇಂದು ಕಬಿನಿ ಹಾಗೂ ನುಗು ಜಲಾಶಯಕ್ಕೆ ಜಿಲ್ಲಾಧಿಕಾರಿಗಳ ಭೇಟಿ

Spread the love
  • ಯಾವುದೇ ಹಾನಿಯಾಗದಂತೆ ಮುಂಜಾಗೃತವಾಗಿ ಅಗತ್ಯ ಕ್ರಮ ವಹಿಸುವಂತೆ ಸೂಚನೆ

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೂರ್ವಭಾವಿಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

image 7

ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ‘ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.ಕಾವೇರಿ ನದಿ ಪ್ರವಾಹ : ಕೊಡಗು ಜಿಲ್ಲೆಯ ಹಲವು ರಾಜ್ಯ ಹೆದ್ದಾರಿ ಬಂದ್​​

image 9

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಸರಗೂರು ತಹಶೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!