ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ- ಜೆಡಿಎಸ್ ಮೈತ್ರಿ ಯಶಸ್ವಿ

Team Newsnap
1 Min Read

ಭಾರೀ ಕುತೂಹಲ ಮೂಡಿಸಿದ್ದ ಜಿಲ್ಲಾ ಡಿಸಿಸಿ ಬ್ಯಾಂಕ್​  ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿಯ ನಾಮಿನಿ  ಸಿ.ಪಿ.ಉಮೇಶ್ ಎಂಟು ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಹಾಗೂ
ಜೆಡಿಎಸ್ ಅಭ್ಯರ್ಥಿ ಅಶೋಕ್ ರವರು 8 ಮತಗಳನ್ನು ಪಡೆದು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

dcc2

ಮದ್ದೂರು ತಾಲೂಕು ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮ ಉದ್ಯಮಿ ಸಿ.ಪಿ.ಉಮೇಶ್, ಹಾಲಿ ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಾಗಿದ್ದಾರೆ. ವೃತ್ತಿಯಲ್ಲಿ ಉದ್ಯಮಿಯಾಗಿದ್ದಾರೆ. ಸಿ.ಪಿ.ಉಮೇಶ್ ತಂದೆ ಪುಟ್ಟಸ್ವಾಮಿ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಒಡನಾಡಿಯಾಗಿರುವ ಸಿ.ಪಿ.ಉಮೇಶ್ ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸಿ.ಪಿ.ಉಮೇಶ್ ನೇಮಕಕ್ಕೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಸೆಯಾಗಿ ನಿಂತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಶಿಫಾರಸು ಮಾಡಿದ್ದರು.

ಈ ಸದಾವಕಾಶವನ್ನು ಬಳಸಿಕೊಂಡ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ. ಸಿ ಎಸ್ ಪುಟ್ಟರಾಜು ಕಾಂಗ್ರೆಸ್‍ಗೆ ಪ್ರತಿತಂತ್ರ ಹೆಣೆದು ಕಾಂಗ್ರೆಸ್‍ನಿಂದ ಬಂಡಾಯವೆದ್ದಿದ್ದ ಅಮರಾವತಿ ಅಶ್ವಥ್ ಅವರನ್ನು ಸೆಳೆದು ತನ್ನ 4 ಮಂದಿ ಸದಸ್ಯರು ಮತ್ತು ಮತದಾನದ ಹಕ್ಕು ಹೊಂದಿರುವ ಮೂವರು ಅಧಿಕಾರಿಗಳು ಹಾಗೂ ಸರ್ಕಾರದ ನಾಮನಿರ್ದೇಶಿತ ನಿರ್ದೇಶಕ ಸಿ.ಪಿ.ಉಮೇಶ್ ಬೆಂಬಲಿಗರೊಂದಿಗೆ ಅಧಿಕಾರಕ್ಕೇರಲು ಸಹಕಾರಿಯಾಗಿದೆ.

dcc4

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲಿ ಎದುರಾದ ಅತಂತ್ರ ಫಲಿತಾಂಶ ಹಾಗೂ ಅಧ್ಯಕ್ಷ ಸ್ಥಾನದ ವಿಚಾರವಾಗಿ ಉಂಟಾದ ಒಡಕಿನ ಲಾಭ ಪಡೆದು ಬಿಜೆಪಿ ಮತ್ತು ಜೆಡಿಎಸ್ ಅಧಿಕಾರ ಹಿಡಿಯಲು ನಡೆಸಿದ ತಂತ್ರಗಾರಿಕೆ ಯಶಸ್ಸು ಕಂಡಿದೆ.

ಅಮರಾವತಿ ಅಶ್ವತ್ಥ ‌ಅವರನ್ನು ಅಫೆಕ್ಸ್ ಬ್ಯಾಂಕ್ ಗೆ ನಾಮ ನಿರ್ದೇಶನ ಮಾಡಲು ನಿರ್ಧರಿಸಲಾಗಿದೆ.

Share This Article
Leave a comment