DCC ಬ್ಯಾಂಕ್‌ ಕಳ್ಳತನ- 4.37ಕೋಟಿ ರು 1.63ಕೋಟಿ ಚಿನ್ನಾಭರಣ ವಶ : ಬ್ಯಾಂಕ್ ಕ್ಲರ್ಕ್ ಸೇರಿ ಮೂವರ ಬಂಧನ

Team Newsnap
1 Min Read

ಮುರಗೋಡ ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, 4.37 ಕೋಟಿ ನಗದು, 1.63ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಬಸವರಾಜ ಹುಣಶಿಕಟ್ಟಿ (30), ಸವದತ್ತಿ ತಾಲೂಕಿನ ಯರಗಟ್ಟಿ ಗ್ರಾಮದ ಸಂತೋಷ ಕಂಬಾರ (31) ಹಾಗೂ ಜೀವಾಪೂರ ಗ್ರಾಮದ ಗಿರೀಶ್ ಬೆಳವಲ (26) ಬಂಧಿತರು.

ಮುರಗೋಡ ಪೊಲೀಸರು ಬಂಧಿತ ಆರೋಪಿಗಳಿಂದ 4.37 ಕೋಟಿ ನಗದು ಹಣ, 1.63 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುತಗೋಡ ಗ್ರಾಮದಲ್ಲಿ ಮಾ.6ರಂದು ಮುರಗೋಡ ಡಿಸಿಸಿ ಬ್ಯಾಂಕ್‍ನಲ್ಲಿ 6 ಕೋಟಿ ನಗದು ಹಣ, ಚಿನ್ನಾಭರಣ ಕಳ್ಳತನ ಆಗಿತ್ತು.

ಈ ಕುರಿತು ಮುರಗೋಡ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಕೃಷ್ಣಪ್ಪ ಯಲಿಗಾರ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಒಂದೇ ವಾರದಲ್ಲಿ ಕಳ್ಳತನ ಪ್ರಕರಣ ಭೇದಿಸುವಲ್ಲಿ ಯಶಸ್ವಿ ಆಗಿದ್ದಾರೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಡಿಸಿಸಿ ಬ್ಯಾಂಕ್‍ನಲ್ಲಿ ಕ್ಲರ್ಕ್ ಕಮ್ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜ ಹುಣಸಿಕಟ್ಟಿ ಎಂಬಾತನೇ ನಕಲಿ ಕೀ ಬಳಸಿ ಆತನ ಇಬ್ಬರು ಸ್ನೇಹಿತರ ಜೊತೆಗೂಡಿ 4.37ಕೋಟಿ ಹಣ, 1.63ಕೋಟಿ ಮೌಲ್ಯದ ಚಿನ್ನಾಭರಣ ಕದ್ದುಕೊಂಡು ಪರಾರಿ ಆಗಿದ್ದರು.

ಕದ್ದ ಹಣವನ್ನು ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ತನ್ನ ಕಬ್ಬಿನ ಗದ್ದೆಯಲ್ಲಿ ಆರು ಅಡಿ ತೆಗ್ಗು ತೆಗೆದು ಹೂತಿಟ್ಟಿದ್ದನು. ಬಳಿಕ ಯಾರಿಗೂ ಅನುಮಾನ ಬಾರದಂತೆ ನೀರು ಹಾಯಿಸಿದ್ದನು. ಇತ್ತ ಪ್ರಕರಣ ಬೆಳಕಿಗೆ ಬಂದ ನಂತರ ಬ್ಯಾಂಕ್ ಸಿಬ್ಬಂದಿಗೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

Share This Article
Leave a comment