ಶಬರಿಮಲೆಗೆ ಡಿಸಿಎಂ ಅಶ್ವಥ್ ನಾರಾಯಣ ಭೇಟಿ : ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಣೆ

Team Newsnap
1 Min Read

ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದರು.

ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, 6.55 ಗಂಟೆಗೆ ಸನ್ನಿಧಾನ ಸೇರಿದರು.

ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಡಿಸಿಎಂ ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‍ಶಾಂತಿ ಅವರಾದ ವಿ.ಕೆ.ಜಯರಾಜ್ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು.

ಪಂದಳಮ್ ಅರಮನೆಗೂ ಭೇಟಿ:

ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತೆರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು.

ಅಲ್ಲಿ ಅಯ್ಯಪ್ಪ ಸ್ವಾಮಿ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದಲೂ ಆಶೀರ್ವಾದ ಪಡೆದರು.

ಡಿಸಿಎಂ ಮಾತನಾಡಿ ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ ಎಂದರು.

Share This Article
Leave a comment