ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು.
ಕೋವಿಡ್-19 ತೀವ್ರ ಸ್ವರೂಪದ ವೇಳೆಯಲ್ಲೇ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಡಿಕೆಶಿ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿ ಆದೇಶಿಸಿದೆ.
ಇದಲ್ಲದೇ ಕಾನೂನುಭಂಗದ ಆರೋಪದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಶಿವಾಜಿನಗರ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಣಕ್ಕೂ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.ಕಾಮಗಾರಿಗೆ ಲಂಚ: ಹರಿಹರ ನಗರಸಭೆ ಎಇ ಲೋಕಾಯುಕ್ತ ಬಲೆಗೆ
2022ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಾನೂನು ಭಂಗ ಮಾಡಿತ್ತು. ಈ ಹಿನ್ನಲೆಯಲ್ಲಿ ಐದು ಪ್ರಕರಣಗಳು ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದವು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು