October 4, 2024

Newsnap Kannada

The World at your finger tips!

CBI , HighCourt , Stay

ಡಿಸಿಎಂ ಡಿ.ಕೆ ಶಿ ಐದು ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

Spread the love

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್

ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು.

ಕೋವಿಡ್-19 ತೀವ್ರ ಸ್ವರೂಪದ ವೇಳೆಯಲ್ಲೇ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಡಿಕೆಶಿ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿ ಆದೇಶಿಸಿದೆ.

ಇದಲ್ಲದೇ ಕಾನೂನುಭಂಗದ ಆರೋಪದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಶಿವಾಜಿನಗರ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಣಕ್ಕೂ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.ಕಾಮಗಾರಿಗೆ ಲಂಚ: ಹರಿಹರ ನಗರಸಭೆ ಎಇ ಲೋಕಾಯುಕ್ತ ಬಲೆಗೆ

2022ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಾನೂನು ಭಂಗ ಮಾಡಿತ್ತು. ಈ ಹಿನ್ನಲೆಯಲ್ಲಿ ಐದು ಪ್ರಕರಣಗಳು ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದವು.

Copyright © All rights reserved Newsnap | Newsever by AF themes.
error: Content is protected !!