ಘನತ್ಯಾಜ್ಯ ಸಂಸ್ಕರಣಾ ಘಟಕಗಳ ಪರಿಶೀಲನೆ ನಡಸಿದ ಡಿಸಿಎಂ ಡಿ.ಕೆ ಶಿವಕುಮಾರ್‌

Team Newsnap
1 Min Read

ಸೀಗೇಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 120 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಮಾರ್ಥ್ಯವಿದ್ದು, ಸದ್ಯ ಸಂಸ್ಕರಣಾ ಘಟಕವು ಚಾಲ್ತಿಯಲ್ಲಿ‌ ಇರುವುದಿಲ್ಲ.ಸಂಸ್ಕರಣಾ ಘಟಕವನ್ನು ಕೂಡಲೆ ಪ್ರಾರಂಭಿಸಲು ಡಿಸಿಎಂ ಡಿ.ಕೆ ಶಿವಕುಮಾರ್‌ ಸೂಚನೆ ನೀಡಿದರು.

ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲನೆ: ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 150 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 110 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದ್ದು, ಅದನ್ನು‌ ಪರಿಶೀಲನೆ ನಡೆಸಿದರು.

ಕನ್ನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲನೆ: ಕನ್ನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 350 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 350 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದೆ. ಪ್ರತಿನಿತ್ಯ ಎಷ್ಟು ಕಾಂಪ್ಯಾಕ್ಟರ್ ಬರುತ್ತದೆ, ಅದಕ್ಕೆ ಅಳವಡಿಸಿರುವ ಜಿ.ಪಿ.ಎಸ್ ಅನ್ನು ಪರಿಶೀಲಿಸಿದರು.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಘನತ್ಯಾಜ್ಯ ಸಂಗ್ರಹ ಹೆಚ್ಚಳವಾಗುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಕುರಿತು ಗಂಭೀರ ಚಿಂತನೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಹರಿಶ್ ಕುಮಾರ್, ವಲಯ ಜಂಟಿ ಆಯುಕ್ತರಾದ ಜಗದೀಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a comment