ಬೆಂಗಳೂರು:
ದೆಹಲಿಯಲ್ಲಿ ಸಂಪುಟ ಕಸರತ್ತು ನಡೆಯುತ್ತಿರುವಾಗಲೇ ಪ್ರಮುಖ 5 ಖಾತೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.
ದೆಹಲಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಜೊತೆ ನಡೆದ ಸಭೆಯಲ್ಲಿ 5 ಖಾತೆಗಳು ನನಗೆ ಬೇಕೇ ಬೇಕು ಎಂದು ಡಿಕೆಶಿ ಹಠ ಹಿಡಿದಿದ್ದಾರೆ.
ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆ ನೀಡುವಂತೆ ಡಿಕೆಶಿ ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ನನಗೆ ಬೇಕು ಡಿಕೆಶಿ ಹೇಳಿದ್ದರೆ , ಬೆಂಬಲಿಗ ಶಾಸಕರಿಗೆ ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆಯನ್ನು ಕೇಳಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಪಟ್ಟ ಕೇಳಿದಾಗ ಹೈಕಮಾಂಡ್ ನಿರಾಕರಿಸಿ ಡಿಸಿಎಂ ಪಟ್ಟ ನೀಡಿತ್ತು. ಒಂದೇ ಡಿಸಿಎಂ ಇರಬೇಕು, ಬೇರೆ ಯಾರಿಗೆ ಡಿಸಿಎಂ ಕೊಡಬಾರದು ಎಂದು ಶಿವಕುಮಾರ್ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯಂತೆ ಸಿದ್ದರಾಮಯ್ಯ ಸಂಪುಟದಲ್ಲಿ ಒಂದೇ ಡಿಸಿಎಂ ನೀಡಲಾಗಿದೆ. ಈಗ ಡಿಕೆ ಶಿವಕುಮಾರ್ ಹೊಸ ಬೇಡಿಕೆಯನ್ನು ಇರಿಸಿದ ಹಿನ್ನೆಲೆಯಲ್ಲಿ ಯಾರಿಗೆ ಈ ಖಾತೆಗಳನ್ನು ಹಂಚಿಕೆ ಮಾಡಬಹುದು ಎಂಬ ಕುತೂಹಲ ಹೆಚ್ಚಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು