January 15, 2025

Newsnap Kannada

The World at your finger tips!

car accident 1

ಡಿಸಿಎಂ ಸವದಿ ಪುತ್ರನ ಕಾರ್ ಬೈಕ್ ಗೆ ಡಿಕ್ಕಿ : ರೈತ ಸಾವು

Spread the love

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನಲ್ಲಿ ಈ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು.

ಅಪಘಾತದ ನಂತರ ತಮ್ಮ ವಾಹನದ ನಂಬರ್ ಜಖಂಗೊಳಿಸಿ ಲಕ್ಷ್ಮಣ ಸವದಿ ಪುತ್ರ ಮತ್ತೊಂದು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಕೂರಿಸಿದ್ದಾರೆ. ನಂತರ ಪೊಲೀಸರು ಆಗಮಿಸಿದ್ದಾರೆ. ಡಿಸಿಎಂ ಪುತ್ರನ ಬದಲು ಕಾರ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ.
ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!