ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ನಾಮದಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ.
ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಮೂಲದ ನಾಗರತ್ನಮ್ಮ ಹಾಗೂ ನರಸಿಂಹರಾಜು ಸಾವನ್ನಪ್ಪಿದ ದಂಪತಿಗಳು ಸಾವನ್ನಪ್ಪಿದವರು.
ಅತಿವೇಗದಲ್ಲಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಈಅಪಘಾತ ಸಂಭವಿಸಿದೆ, ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಭಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಸೇರಿದ ಕಾರು ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿದೆ. ಮಂಜು ಭಾರ್ಗವ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಕಳುಹಿಸಲಾಗಿದೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ: ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ
ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!
ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು