May 20, 2022

Newsnap Kannada

The World at your finger tips!

car acci

ತುಮಕೂರು ಬಳಿ ಭೀಕರ ಕಾರು ಅಪಘಾತ- ಸ್ಥಳದಲ್ಲೇ ದಂಪತಿ ಸಾವು

Spread the love

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ನಾಮದಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ.

ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಮೂಲದ ನಾಗರತ್ನಮ್ಮ ಹಾಗೂ ನರಸಿಂಹರಾಜು ಸಾವನ್ನಪ್ಪಿದ ದಂಪತಿಗಳು ಸಾವನ್ನಪ್ಪಿದವರು.

ಅತಿವೇಗದಲ್ಲಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಈಅಪಘಾತ ಸಂಭವಿಸಿದೆ, ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ತುಮಕೂರು ಭಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್​​ ಅವರಿಗೆ ಸೇರಿದ ಕಾರು ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿದೆ. ಮಂಜು ಭಾರ್ಗವ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಕಳುಹಿಸಲಾಗಿದೆ.

ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!