ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ : ಪ್ರಧಾನಿ ಮೋದಿಯಿಂದ ಗೌರವ ನಮನ

Team Newsnap
1 Min Read

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ಗಣ್ಯರು ಸದೈವ್ ಅಟಲ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರು ಭಾರತ ಮಾತೆಯ ಮಹಾನ್ ಮಗ. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯವಾಗಿದೆ, ಭಾರತಕ್ಕೆ ಅವರು ನೀಡಿದ ಕೊಡುಗೆ ಅಳಿಸಲಾಗದು. ಅವರ ನಾಯಕತ್ವ ಮತ್ತು ದೂರದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ”ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಾಜಪೇಯಿ ಅವರು 90ರ ದಶಕದಲ್ಲಿ ಬಿಜೆಪಿಯನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತಂದಿದ್ದರು ಮತ್ತು ಒಟ್ಟಾರೆಯಾಗಿ ಆರು ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಗೃಹಲಕ್ಷ್ಮಿ ಯೋಜನೆ : 1 ಕೋಟಿ ದಾಟಿದ ಅರ್ಜಿ ಸಲ್ಲಿಕೆ

ಅಟಲ್ ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸುವಲ್ಲಿ ನಾನು ಭಾರತದ 140 ಕೋಟಿ ಜನರೊಂದಿಗೆ ಸೇರುತ್ತೇನೆ ಎಂದು ಹೇಳಿದರು.

Share This Article
Leave a comment