ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆಯೊಬ್ಬರು ಬಂದೂಕು
ಸ್ವಚ್ಛ ಮಾಡುವ ವೇಳೆ ಆಕಸ್ಮಿಕವಾಗಿ ಗುಂಡು ತಾಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.
ಸಶಸ್ತ್ರ ಮೀಸಲು ಪಡೆಯ ಪೇದೆ ಚೇತನ್ (28) ಸಾವನ್ನಪ್ಪಿದವರು, ದಾವಣಗೆರೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ತರಬೇತಿ ಮುಗಿಸಿ ಬಂದೂಕು ಸ್ವಚ್ಛ ಮಾಡಿವ ವೇಳೆ ಈ ಅವಘಡ ಸಂಭವಿಸಿದೆ.
ತೀವ್ರವಾಗಿ ಗಾಯಗೊಂಡ ಚೇತನ್ ಅವರನ್ನು ಸಿಟಿ ಸೆಂಟ್ರಲ್ ಆಸ್ಪತ್ರೆ ಗೆ ಸಾಗಿಸಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಚೇತನ ಸಾವನ್ನಪ್ಪಿದ್ದರು
ಮೃತ ಪೇದೆ ಚೇತನ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದವರು., 2012 ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸೇರಿದ್ದರು.
ಸುದ್ದಿ ತಿಳಿಯುತ್ತಲೇ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಎಸ್. ರವಿ ಆಸ್ಪತ್ರೆ ಗೆ ಭೇಟಿ ನೀಡಿದರು.
ಆಕಸ್ಮಿಕವಾಗಿ ನಡೆದಿರುವ ಘಟನೆಯಲ್ಲಿ ಚೇತನ್ ಸಾವನ್ನಪ್ಪಿದ್ದಾನೆ. ಆತನಿಗೆ ಒಬ್ಬ ಮಗ ಇದ್ದಾನೆ. ಇಲಾಖೆಯಿಂದ ಮೃತನ ಕುಟುಂಬಕ್ಕೆ ಅಗತ್ಯ ಸಹಾಯ ಮಾಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಎಸ್ಸಿ ಸಿ.ಬಿ. ರಿಷ್ಯಂತ್ ಕೂಡ ಜೊತೆಯಲ್ಲಿ ಇದ್ದರು.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ