ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಲು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀರ್ಮಾನಿಸಿದೆ.
ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ಕಳೆದ ವರ್ಷ ನೀಡಿದಂತೆ ಸರ್ಕಾರದಿಂದ 5ಲಕ್ಷರೂ ನೆರವು ಕೊಡಿಸಲು ನಿರ್ಣಯಿಸಲಾಗಿದೆ.
ಪತ್ರಕರ್ತರ ಕುಟುಂಬಕ್ಕೆ ಪಡಿತರ ಕಿಟ್ ಕೊಡಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ಮಾಡಿಸಲು ತೀರ್ಮಾನಿಸಲಾಯಿತು
ಸಭೆಯಲ್ಲಿ ಅಗಲಿದ ಪತ್ರಕರ್ತರು ಮತ್ತು ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ಸಂಘದ ಪದಾಧಿಕಾರಿಗಳಾದ ಮತ್ತಿಕೆರೆ ಜಯರಾಂ, ಜೆ.ಸಿ.ಲೋಕೇಶ್, ಸಂಜೀವ ರಾವ್ ಕುಲಕರ್ಣಿ, ಬಂಗ್ಲೆ ಮಲ್ಲಿಕಾರ್ಜುನ, ಕಟ್ಟಡ ಸಮಿತಿ ಸದಸ್ಯರಾದ ಎಚ್.ಬಿ.ಮದನಗೌಡ ಮತ್ತಿತರರು ಹಾಜರಿದ್ದರು.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ